ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ನಿಕಟಪೂರ್ವಾಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಮಾತನಾಡಿದರು. ಕೆ.ಸೇಸಪ್ಪ ರೈ ರಾಮಕುಂಜ, ಕೆ.ಪದ್ಮಪ್ಪ ಗೌಡ ರಾಮಕುಂಜ ಮೊದಲಾದವರಿದ್ದರು.
ಕಡಬ: ಭಾಷೆ, ಸಾಹಿತ್ಯ, ಕಲೆ ಆಧಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ. ಕನ್ನಡದ ಹೆಮ್ಮೆಯನ್ನು ಪ್ರಪಂಚಕ್ಕೆ ಸಾರುತ್ತಿದೆ. ತ್ಯಾಗ, ದಾನ ಮನುಷ್ಯನ ಆರೋಗ್ಯ, ಆಯಸ್ಸು ಹೆಚ್ಚಿಸುತ್ತದೆ. ಹೆಚ್ಚು ಮೊತ್ತ ಇದ್ದಾಗ ಹೆಚ್ಚು ಜನಕ್ಕೆ ದತ್ತಿನಿಧಿ ನೀಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ನಿಕಟಪೂರ್ವಾಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಹೇಳಿದರು.
ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ರಾಮಕುಂಜ ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಅಧ್ಯಕ್ಷ ಕೆ.ಪದ್ಮಪ್ಪ ಗೌಡ ರಾಮಕುಂಜ, ಗೌರವ ಕೋಶಾಧ್ಯಕ್ಷ ಬಾಲಚಂದ್ರ ಮುಚ್ಚಿಂತಾಯ, ಸದಸ್ಯರಾದ ವೆಂಕಟ್ರಮಣ ಆರ್.ನೆಲ್ಯಾಡಿ, ಯಶವಂತ ರೈ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಕಿಶೋರ್‌ಕುಮಾರ್ ಬಿ. ಸ್ವಾಗತಿಸಿ, ನಿರೂಪಿಸಿದರು. ಸದಸ್ಯೆ ಪ್ರೇಮ ಬಿ.ರಾಮಕುಂಜ ವಂದಿಸಿದರು.