Death 
ಉಡುಪಿ

ಕುಸಿದು ಬಿದ್ದು ಕಾರ್ಮಿಕ ಸಾವು

ಇಂದಿರಾ ಎನ್ ಕೆ
ಗುರುಪುರ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್‌ಇಝಡ್ ವಲಯದಲ್ಲಿರುವ ಉಲ್ಕಾ ಕಂಪನಿಯಲ್ಲಿ ಕಾರ್ಮಿಕನಾಗಿದ್ದ ಬಿಹಾರ ಪಾಟ್ನಾದ ವ್ಯಕ್ತಿ ಬೈಜನಾಥ ಪ್ರಸಾದ್(41) ಎಂಬುವರು ಶನಿವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಒಂದು ವರ್ಷದಿಂದ ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಶನಿವಾರ ಮಧ್ಯಾಹ್ನ ಊಟಕ್ಕೆಂದು ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಸ್ಥಳದಲ್ಲಿದ್ದ ಕಾರ್ಮಿಕರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಸಹೋದರರು ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.