ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ ನಡೆಯಿತು.  
ಉಡುಪಿ

ಭುವನೇಂದ್ರ ಕಾಲೇಜಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಕಾರ್ಕಳ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ವಿಭಾಗ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ಕಾರಿ ಆಸ್ಪತ್ರೆ, ರೋಟರಿ ಕ್ಲಬ್, ಕಾರ್ಕಳ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು ಐಕ್ಯೂಎಸಿ ಹಾಗೂ ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್ ರೋವರ್ಸ್ ರೇಂಜರ್ಸ್‌ನ ಸಹಯೋಗದೊಂದಿಗೆ ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಅಧ್ಯಕ್ಷ ಡಾ.ಕೆ.ಆರ್.ಜೋಶಿ ಉದ್ಘಾಟಿಸಿದರು. ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಈಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್., ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ದಿಶಾ ದಿವಾಕರ್ ಉಪಸ್ಥಿತರಿದ್ದರು.
ಕಾರ್ಕಳ ತಾಲೂಕಿನ ಸೀನಿಯರ್ ಹೆಲ್ತ್ ಆಫೀಸರ್ ವಸಂತ ಶೆಟ್ಟಿ ಸ್ವಾಗತಿಸಿದರು. ಸುಶೀಲಾ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶಂಕರ್ ಕುಡ್ವ ವಂದಿಸಿದರು.