ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ರ ಅಂಗವಾಗಿ ದೇವಸ್ಥಾನ ಮುಂಭಾಗದ ವೇದಿಕೆಯಲ್ಲಿ ಮಂಗಳವಾರ ನಡೆದ ಕುಸ್ತಿ ಸ್ಪರ್ಧೆ ಗಮನ ಸೆಳೆಯಿತು.
ನಾಡೋಜ ಜಿ.ಶಂಕರ್ ಕುಸ್ತಿ ಸ್ಪರ್ಧೆ ಉದ್ಘಾಟಿಸಿದರು. ವಿವಿಧ ದೇಹ ತೂಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಿತು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ಮಹಿಳಾ ಮಹಾಜನ ಸಂಘ ಅಧ್ಯಕ್ಷೆ ಕವಿತಾ ಶರತ್, ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಜಂಟಿ ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ನಾಲ್ಕುಪಟ್ನ ಮೊಗವೀರ ಸಂ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂ ಅಧ್ಯಕ್ಷೆ ಸುಗುಣಾ ಕರ್ಕೇರ, ವಾಸುದೇವ ಸಾಲ್ಯಾನ್, ಗುಂಡು ಅಮೀನ್, ವಿಜಯ ಸುವರ್ಣ, ಸತೀಶ್ ಅಮೀನ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಿತ್ಯ ಚಂಡಿಕಾಯಾಗ ನೆರವೇರಿತು. ಕ್ಷೇತ್ರದಲ್ಲಿ ಬೆಳಗ್ಗೆ ಉದಯ ಪೂಜೆ, ನವದುರ್ಗೆಯರಿಗೆ ಮಹಾಮಂಗಳಾರತಿ, ಮಹಾಪೂಜೆ, ಅನ್ನಸಂತರ್ಪಣೆ, ಪ್ರಸಾದ ವಿತರಣೆ, ನವದುರ್ಗೆಯರಿಗೆ ರಾತ್ರಿ ಮಹಾಪೂಜೆ ಹಾಗೂ ಶ್ರೀ ಭಗವತಿ ಕಲ್ಪೋಕ್ತ ಪೂಜೆ ನೆರವೇರಿತು. ದಸರಾ ಮುಖ್ಯ ವೇದಿಕೆಯಲ್ಲಿ ಭಜನಾ ಸಂಕೀರ್ತನೆ, ಭಕ್ತಿಗಾನ ಸುಧೆ, ಧಾರ್ಮಿಕ ಪ್ರವಚನ, ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸ್ಯಾಕ್ಸೋಫೋನ್, ಭಜನ್ ್ಯೂಶನ್ ಕಲಾಸಕ್ತರನ್ನು ಆಕರ್ಷಿಸಿತು.