ಕುಂಭಾಶಿಯ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನದ ಕಾರ್ಯದರ್ಶಿ, ಖ್ಯಾತ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ.
* ಕೊಂಡದಕುಳಿ ರಾಮಚಂದ್ರ ಹೆಗಡೆ ಮಾಹಿತಿ
* ಮೇ 31ರಂದು ಉಡುಪಿ ರಾಜಾಂಗಣದಲ್ಲಿ ಪ್ರದಾನ
ಉಡುಪಿ: ಕುಂಭಾಶಿಯ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನವು ಕಳೆದ ಕೆಲವು ವರ್ಷದಿಂದ ಯಕ್ಷಗಾನದ ಮೇರು ನಟ 'ಕೊಂಡದಕುಳಿ ರಾಮ ಹೆಗಡೆ' ಸ್ಮರಣಾರ್ಥ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡುತ್ತಿದ್ದು, ಈವರೆಗೆ 34 ಕಲಾವಿದರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಕಳೆದ ವರ್ಷದಿಂದ ಕಲೆ, ಸಾಹಿತ್ಯ, ಸಂಗೀತ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದ ಮಹಾನ್ ಸಾಧಕರಿಗೆ ಹಾಗೂ ಸಂಘಟನೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಒಂದು ಲಕ್ಷ ರೂ. ನಗದು ಪುರಸ್ಕಾರದ 'ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ'ಯನ್ನು ಪ್ರತಿಷ್ಠಾನ ಸ್ಥಾಪಿಸಿದೆ. ಪ್ರಥಮ ಪ್ರಶಸ್ತಿಯನ್ನು ಸಾರಸ್ವತ ಲೋಕದ ಅಪ್ರತಿಮ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರದಾನ ಮಾಡಿದೆ.
ಈ ವರ್ಷ ಎರಡೂ ಪ್ರಶಸ್ತಿಯನ್ನು ಯಕ್ಷಗಾನ ಕಲೆ, ಕಲಾವಿದರ ಕ್ಷೇಮ ಚಿಂತನೆಯೊಂದಿಗೆ ಸಮಾಜಪರ ಕಾಳಜಿಯಿಂದ ಕ್ರಿಯಾಶೀಲವಾಗಿರುವ ಯಕ್ಷಗಾನ ಕಲಾರಂಗ (ರಿ.) ಉಡುಪಿ ಸಂಸ್ಥೆಗೆ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮೇ 31ರಂದು ಮಧ್ಯಾಹ್ನ 2:30ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಕೊಂಡದಕುಳಿ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.