ಶಾಸಕ ಯಶ್ಪಾಲ್ ಸುವರ್ಣ ಯಕ್ಷಗಾನ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಉಡುಪಿ: ಸರ್ಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಸಹಕಾರ ಮಹತ್ವದಾಗಿದೆ. ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಯಂತೆ ಅನುದಾನ ಒದಗಿಸಲಾಗಿದ್ದು, ಸುಮಾರು 4 ಲಕ್ಷ ವೆಚ್ಚದಿಂದ ನೂತನ ಶೌಚಾಲಯ ಕಟ್ಟಡ ನಿಮಾರ್ಣವಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ, ಮಾಜಿ ಅಧ್ಯೆ ಸುಕನ್ಯಾ ಶೆಟ್ಟಿ, ಮಾಜಿ ನಗರಸಭಾ ಸದಸ್ಯ ವಿಜಯ ಕೊಡವೂರು, ದಾನಿಗಳಾದ ಆನಂದ, ಸ್ಥಳಿಯ ಪ್ರಮುಖರಾದ ಶರತ್ ಬೈಲಕೆರೆ, ಗಾಯತ್ರಿ ಸುರೇಶ್, ಕೃಷ್ಣ ಶೆಟ್ಟಿ, ಚರಣ್ ರಾಜ್, ಯಕ್ಷಗಾನ ಗುರು ರತ್ನಾಕರ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಶೌಚಾಲಯ, ವಿದ್ಯಾರ್ಥಿಗಳ ಶಾಲಾ ಸಂಸತ್ ಹಾಗೂ ಶಾಲೆಯಲ್ಲಿ ಶಿಕ್ಷಕರಾಗಿದ್ದ ಪ್ರಕಾಶಿನಿ ಅವರ ಸ್ಮರಣಾರ್ಥ ಶಾಲಾ ವಿದ್ಯಾರ್ಥಿಗಳಿಗೆ ನಿರ್ಮಿಸಿದ ಸೈಕಲ್ ಸ್ಟಾ$ಂಡ್ ಉದ್ಘಾಟಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎನ್. ಸ್ವಾಗತಿಸಿ, ಶಿಕ್ಷಕ ದಿವಾಕರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.