ಉಡುಪಿ: ಪೋಕ್ಸ್ ಪ್ರಕರಣದಲ್ಲಿ ಜೈಲು ಸೇರಿದ ಬೇಸರದಲ್ಲಿ ಯುವಕನೊಬ್ಬ ಮಣಿಪಾಲ ಕೆಎಂಸಿ ಕ್ಯಾಂಪಸ್ ಕಾರು ಪಾರ್ಕಿಂಗ್ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೊರಬ ನಿವಾಸಿ ಬಸವರಾಜ (25) ಮೃತರು. ಈತ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿ ಜೈಲಿಗೆ ಹೋಗಿ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ವಿಪರೀತ ಮದ್ಯಪಾನ ಮಾಡುತ್ತಿದ್ದು, ಜೈಲಿಗೆ ಹೋದ ಬಗ್ಗೆ ನೊಂದುಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮಂಗವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.