ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ವಸತಿಗೃಹದಲ್ಲಿ ತಂಗಿದ್ದ ರಾಮನಗರ ಜಿಲ್ಲೆಯ ಕೈಲಂಜ ಹೋಬಳಿಯ ಉಚ್ಚಮ್ಮನದೊಡ್ಡಿ ನಿವಾಸಿ ಮಧು ಎಸ್.(30) ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜುಲೈ 8ರಂದು ಕುಕ್ಕೆ ದೇವಸ್ಥಾನದ ದರ್ಶನಕ್ಕಾಗಿ ಬಂದು ಖಾಸಗಿ ವಸತಿಗೃಹದಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಗುರುವಾರ ಮಧ್ಯಾಹ್ನ ಕೊಠಡಿ ಖಾಲಿ ಮಾಡಬೇಕಿದ್ದರೂ ಹೊರಗೆ ಬಾರದ ಹಿನ್ನೆಲೆ ಸಂಜೆ 4ಕ್ಕೆ ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ, ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.