ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯನ್ನು ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವರುಣ್ ಪ್ರಸಾದ್ ಉದ್ಘಾಟಿಸಿ ಮಾತನಾಡಿದರು. ಪ್ರಮುಖರಾದ ಎಂ.ಎಲ್. ಅಶ್ವಿನಿ, ಅಶ್ವಿನ್ ಕೊಲ್ಲಾಲಯಿಲ್, ಪಿ.ಆರ್.ಸುನೀಲ್ ಉಪಸ್ಥಿತರಿದ್ದರು.
ಕಾಸರಗೋಡು: ಉದ್ಯೋಗಾಕಾಂಕ್ಷಿ ಯುವ ಜನತೆಯನ್ನು ಮತ್ತು ಪಿ.ಎಸ್.ಸಿ ರ‌್ಯಾಂಕ್ ವಿಜೇತರನ್ನು ವಂಚಿಸುವ ವಿಚಾರದಲ್ಲಿ ವಿ.ಡಿ. ಸತೀಶನ್ ಸರ್ಕಾರ ಪಿಣರಾಯಿ ಸರ್ಕಾರದ ಹಾದಿಯನ್ನೇ ಅನುಸರಿಸುತ್ತಿದ್ದು, ಕೇರಳ ಲೋಕಸೇವಾ ಆಯೋಗ (ಪಿಎಸ್‌ಸಿ) ಇಂದು ಪಿಣರಾಯಿ-ಸತೀಶನ್ ಸರ್ವೀಸ್ ಕಮಿಷನ್ ಆಗಿ ಅಧೋಗತಿಗೆ ತಲುಪಿದೆ ಎಂದು ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವರುಣ್ ಪ್ರಸಾದ್ ಟೀಕಿಸಿದ್ದಾರೆ.
ಪಿ.ಎಸ್.ಸಿ ಅಕ್ರಮಗಳ ವಿರುದ್ಧ ಯುವಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ಉದ್ಘಾಟಿಸಿ ಮಾತನಾಡಿದರು.
ಯುವಮೋರ್ಚಾ ಜಿಲ್ಲಾಧ್ಯಕ್ಷ ಅಶ್ವಿನ್ ಕೊಲ್ಲಾಲಯಿಲ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್, ಜಿಲ್ಲಾ ಕಾರ್ಯದರ್ಶಿ ಮಹೇಶ್ ಗೋಪಾಲ್, ಯುವಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶ್ರುತಿ ಎನ್.ವಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನುಷ್ ಎಚ್.ಎನ್., ಶ್ರುತಿ ವಿನೋದ್, ಜಿಲ್ಲಾ ಸಮಿತಿ ಸದಸ್ಯೆ ಸುಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕೆ.ಎಸ್.ರಮಣಿ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ, ನೀಲೇಶ್ವರಂ ಮಂಡಲ ಸಮಿತಿ ಅಧ್ಯಕ್ಷ ಸಾಗರ್ ಚಾತ್ತಮತ್ ಉಪಸ್ಥಿತರಿದ್ದರು.
ಬಿ.ಸಿ.ರೋಡ್ ಜಂಕ್ಷನ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಪೊಲೀಸರ ತಡೆ ಭೇದಿಸಿ ಮುನ್ನುಗ್ಗಲೆತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಚದುರಿಸಿದರು.