ಆನೆಗುಡ್ಡೆ ಸಮೀಪ ನಡೆದ ಅಪಘಾತದಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿರುವುದು. 
ಉಡುಪಿ

ರಸ್ತೆ ವಿಭಜಕಕ್ಕೆ ಪ್ರವಾಸಿ ಬಸ್​​​ ಡಿಕ್ಕಿ

ಆನೆಗುಡ್ಡೆ ಗೋಪುರದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ

ಕುಂದಾಪುರ: ಆನೆಗುಡ್ಡೆ ಗೋಪುರದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮಧ್ಯಾಹ್ನ ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿದ್ದಾರೆ.

ಪ್ರವಾಸಿ ಬಸ್​ ದೇವಸ್ಥಾನದ ಕಡೆಯಿಂದ ತ್ರಾಸಿಯತ್ತ ತೆರಳಲು ಆನೆಗುಡ್ಡೆ ಗೋಪುರದ ಬಳಿ ತಿರುವು ಪಡೆಯುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಪ್ರವೇಶಿಸಿದ್ದು, ಮಂಗಳೂರಿನಿಂದ ಕುಂದಾಪುರದ ಕಡೆಗೆ ವೇಗವಾಗಿ ಬರುತ್ತಿದ್ದ ಎರಡು ಬುಲೆಟ್​ ಟ್ಯಾಂಕರ್​ಗಳ ಪೈಕಿ ಒಂದು ಟ್ಯಾಂಕರ್​ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದೆ. ಈ ವೇಳೆ ಟ್ಯಾಂಕರ್​ ಬಸ್ಸಿನ ಬಲಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ. ಅಪಘಾತದಿಂದ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.