ಮಂಗಳೂರು: ಯು.ಜಿ. ನೀಟ್ ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದಿರೆಯ ಎಕ್ಸಲೆಂಟ್ ಸೈನ್ಸ್ ಆ್ಯಂಡ್ ಕಾಮರ್ಸ್ ಪದವಿಪೂರ್ವ ಕಾಲೇಜಿನ ನಿಖಿಲ್ ಬಿ.ಗೌಡ 720ರಲ್ಲಿ 710 ಅಂಕ ಗಳಿಸಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಕಾಲೇಜಿನ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ನೀಟ್ ಸಂಯೋಜಕ ಡಾ.ಪ್ರಶಾಂತ್ ಹೆಗ್ಡೆ ಸೇರಿದಂತೆ ಎಲ್ಲಾ ಶಿಕ್ಷಕರು ವಿದ್ಯಾರ್ಥಿಯ ಅಪೂರ್ವ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.