ಅರಸೀಕೆರೆ: ನಗರದ ವಾಚನಾಲಯ ರಸ್ತೆಗೆ ಹೊಂದಿಕೊಂಡಂತಿರುವ ಅಂಗಡಿ- ಮುಂಗಟ್ಟುಗಳಲ್ಲಿ ಬೆಲೆ ಏರಿಕೆ ನಡುವೆಯೂ ಯುಗಾದಿ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು.
ಕಿತ್ತಳೆ, ಮೋಸಂಬಿ, ಕಲ್ಲಂಗಡಿ, ಬಾಳೆಹಣ್ಣು, ಸೇಬು ಸೇರಿದಂತೆ ವಿವಿಧ ಹಣ್ಣುಗಳ ಬೆಲೆ ಗಗನಮುಖಿಯಾಗಿದೆ. ಸೇವಂತಿಗೆ ಹೂ ಮಾರಿಗೆ 150 ರೂ. ಆಸುಪಾಸಿನಲ್ಲಿ ಮಾರಾಟವಾಗಿದ್ದರೆ, ಗುಲಾಬಿ, ಮಲ್ಲಿಗೆ, ಕನಕಾಂಬರ, ಕಾಕಡ ಧಾರಣೆಯೂ ದುಬಾರಿಯಾಗಿತ್ತು. ಯುಗಾದಿ ಹೊಸ ವರ್ಷದ ಮೊದಲ ಹಬ್ಬವಾಗಿದೆ.