ಜಿಲ್ಲೆ

ಬೆಳೆಗೆ ಸರಿಯಾದ ಬೆಲೆ ಸಿಗಲಿಲ್ಲವೆಂದು ರೈತ ಆತ್ಮಹತ್ಯೆ

ರಾಣೆಬೆನ್ನೂರ: ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ದೊರೆಯಲಿಲ್ಲವೆಂದು ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿಯಲ್ಲಿ ನಡೆದಿದೆ.

ಬಸವರಾಜ ಲಕ್ಷ$್ಮಪ್ಪ ಬಳ್ಳಾರಿ (47) ಮೃತ ರೈತ.

ಇವರು ಜಮೀನಿನಲ್ಲಿ ಹತ್ತಿ, ಶೇಂಗಾ, ಗೋವಿನಜೋಳ ಬೆಳೆ ಬೆಳೆದಿದ್ದರು. ಆದರೆ, ಮಳೆಯಿಂದ ಬೆಳೆ ಹಾಳಾಗಿತ್ತು. ಅಲ್ಲದೆ ಮಾರುಕಟ್ಟೆಯಲ್ಲಿ ಬೆಳೆಗಳಿಗೆ ಸರಿಯಾದ ಬೆಲೆ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದು ಮನೆ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.