ರಾಯಚೂರಿನಲ್ಲಿ ಡಿಡಿಪಿಐ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಜಗದೀಶಗೆ ಕರ್ನಾಟಕ ರಕ್ಷಣಾ ವೇದಿಕೆ ದೇವದುರ್ಗ ಘಟಕ ಮನವಿ ಸಲ್ಲಿಸಿತು. ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ತಾಲೂಕು ಅಧ್ಯಕ್ಷ ನಂದಪ್ಪ ಪಿ.ಮಡ್ಡಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಪ್ರಮುಖರಾದ ಭೀಮಣ್ಣ ನಾಯಕ, ನಂದಪ್ಪ ಎಸ್., ತಮ್ಮಣ್ಣ ಹೇರುಂಡಿ ಇದ್ದರು. 
ಜಿಲ್ಲೆ

ಅನಧಿಕೃತ ಕೋಚಿಂಗ್ ಸೆಂಟರ್ ಬಂದ್ ಮಾಡಿ

Kopala - Desk - Eraveni

ದೇವದುರ್ಗ: ತಾಲೂಕಿನಲ್ಲಿ ವಿವಿಧ ಸಂಸ್ಥೆಗಳು ನಡೆಸುತ್ತಿರುವ ಅನಧಿಕೃತ ನವೋದಯ ಕೋಚಿಂಗ್ ಸೆಂಟರ್‌ಗಳು, ಬೇಸಿಗೆ ತರಬೇತಿ ಶಿಬಿರಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಜಗದೀಶಗೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಮಂಗಳವಾರ ಮನವಿ ಸಲ್ಲಿಸಿತು.

ತಾಲೂಕು ಸೇರಿ ಜಿಲ್ಲೆಯಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್‌ಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಹೆಸರಿನಲ್ಲಿ ಪಾಲಕರನ್ನು ವಸೂಲಿ ಮಾಡುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಬೇಸಿಗೆ ತರಬೇತಿ ಶಿಬಿರ, ಪಠ್ಯಾಧಾರಿತ ಕೋಚಿಂಗ್ ಕ್ಲಾಸ್ ನಡೆಸುತ್ತಿವೆ.

ಇನ್ನು ಶೈಕ್ಷಣಿಕ ವರ್ಷ ಪ್ರಾರಂಭದ ಅವಧಿಯಲ್ಲಿ ಅನಧಿಕೃತವಾಗಿ ನವೋದಯ ಕೋಚಿಂಗ್ ಸೆಂಟರ್ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆ ಮಕ್ಕಳನ್ನು ಕರೆದುತಂದು ಯಾವುದೇ ದಾಖಲೆ ಇಲ್ಲದೆ ತರಬೇತಿ ನೀಡುತ್ತಿವೆ. ಈ ಮಕ್ಕಳ ದಾಖಲೆ ಸರ್ಕಾರಿ ಶಾಲೆಗಳಲ್ಲಿ ಇರುತ್ತಿದ್ದು, ಪಾಲಕರಿಂದ 80ರಿಂದ 1ಲಕ್ಷ ರೂ. ಫೀಸ್ ಪಡೆಯುತ್ತಿವೆ.

ಇದರ ಜತೆಗೆ ಸರ್ಕಾರದ ವಿವಿಧ ಯೋಜನೆಗಳು ಮುಖ್ಯಶಿಕ್ಷಕರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಈ ಬಗ್ಗೆ ಬಿಇಒಗೆ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ತಾಲೂಕು ಸೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರ್‌ಗಳಿಗೆ ಕಡಿವಾಣ ಹಾಕಬೇಕು.

ನವೋದಯ ಕೋಚಿಂಗ್ ಸೆಂಟರ್ ಬಂದ್‌ಮಾಡಿ ಮಕ್ಕಳು ದಾಖಲೆ ಇರುವ ಶಾಲೆಯಲ್ಲಿ ಅಭ್ಯಾಸ ಮಾಡಲು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಎಲ್ಲ ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ತಾಲೂಕು ಅಧ್ಯಕ್ಷ ನಂದಪ್ಪ ಪಿ.ಮಡ್ಡಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಪ್ರಮುಖರಾದ ಭೀಮಣ್ಣ ನಾಯಕ, ನಂದಪ್ಪ ಎಸ್., ತಮ್ಮಣ್ಣ ಹೇರುಂಡಿ, ಅಮರೇಶ ನಾಯಕ, ಅಮರೇಗೌಡ, ರಾಮನಗೌಡ ಇತರರಿದ್ದರು.