ಲಿಂಗಸುಗೂರು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿಗೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕರವೇ ಸ್ವಾಭಿಮಾನಿ ಸೇನೆ ತಾಲೂಕು ಅಧ್ಯಕ್ಷ ಜಿಲಾನಿ ಪಾಷಾ, ಉಪಾಧ್ಯಕ್ಷ ತಿಮ್ಮನಗೌಡ ಪೊಲೀಸ್ ಪಾಟೀಲ್, ದೇವರಭೂಪೂರ ಗ್ರಾಮ ಘಟಕದ ಅಧ್ಯಕ್ಷ ನನ್ನೆಸಾಬ, ಬಸನಗೌಡ ಇತರರಿದ್ದರು. 
ಜಿಲ್ಲೆ

ದೈವಿ ವನದಲ್ಲಿ ಅನಧಿಕೃತವಾಗಿ ಹಣ ವಸೂಲಿ

ಲಿಂಗಸುಗೂರು: ಶ್ರೀ ಅಮರೇಶ್ವರ ಕ್ಷೇತ್ರದಲ್ಲಿರುವ ದೈವಿ ಉದ್ಯಾನದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ಸ್ವಾಭಿಮಾನಿ ಸೇನೆ ದೇವರಭೂಪೂರ ಗ್ರಾಮ ಘಟಕದ ಕಾರ್ಯಕರ್ತರು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪವಾಡೆಪ್ಪ ಎನ್ನುವವರು ರಸೀದಿ ನೀಡದೆ ಉದ್ಯಾನಕ್ಕೆ ಬರುವ ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಕುರಿ, ಮೇಕೆ ಮೇಯಲು ಬಿಟ್ಟು ವನ ಹಾಳಾಗಿದೆ. ಈ ಕುರಿತು ಮೇಲಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೊರಗುತ್ತಿಗೆ ನೌಕರನನ್ನು ಹಾಗೂ ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಕಾರ್ಯಾಲಯದ ಮುಂದೆ ಧರಣಿ ನಡೆಸಲಾಗುವುದು ಎಂದರು.