ಸೋಮವಾರಪೇಟೆ: ಪಟ್ಟಣದ ಹೊಸ ಬಡಾವಣೆಯಲ್ಲಿ ರಾತ್ರೋ ರಾತ್ರಿ ಅನಧಿಕೃತ ಶೆಡ್ ನಿರ್ಮಾಣಗೊಂಡಿದ್ದು, ಇದಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂದು ತಿಳಿದು ಬಂದಿದೆ.
ಸೋಮವಾರ ಸ್ಥಳಕ್ಕೆ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸರಿಗೆ ದೂರು ನೀಡಿದ್ದು, ಮಂಗಳವಾರ ಪೊಲೀಸ್‌ರೊಂದಿಗೆ ಸ್ಥಳಕ್ಕೆ ತೆರಳಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ. ಮಹದೇಶ್ವರ ಬಡಾವಣೆಯ ಕೆಲವು ನಿವಾಸಿಗಳು ಏಕಾಏಕಿ ಸಿದ್ದಿವಿನಾಯಕ ಸೇವಾ ಸಮಿತಿ ಬ್ಯಾನರ್ ಅಳವಡಿಸಿ ಶೆಡ್ ನಿರ್ಮಾಣ ಮಾಡಿದ್ದಾರೆ.