ಕೆಜಿಎಫ್: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ 6 ಕ್ಷೇತ್ರಗಳಿಗೆ ಶಾಸಕಿ ರೂಪಕಲಾ ನೇತೃತ್ವದಲ್ಲಿ ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗೆ ಕೆಜಿಎಫ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು ಒಳಪಡಲಿದ್ದು, ಟ್ಟಮಾದಮಂಗಲ ಕ್ಷೇತ್ರಕ್ಕೆ ಕಾವಲಹಳ್ಳಿ ಶ್ರೀರಾಮರೆಡ್ಡಿ, ತಿ.ಗೋಲ್ಲಹಳ್ಳಿ ಶ್ರೀನಿವಾಸ್, ಕ್ಯಾಸಂಬಳ್ಳಿ ಭಾಸ್ಕರ್ರೆಡ್ಡಿ, ಕಮ್ಮಸಂದ್ರ ಅಮರನಾಥ್, ಎನ್.ಜಿ.ಹುಲ್ಕೂರು ಪಂಚಾಯಿತಿ ಕ್ಷೇತ್ರದ ಮಹಿಳಾ ಅಭ್ಯರ್ಥಿ ಅಮರಾವತಿ, ಸುಂದರಪಾಳ್ಯ ಕ್ಷೇತ್ರಕ್ಕೆ ನಂದಕುಮಾರ ಅವರನ್ನು ಆಯ್ಕೆ ಮಾಡಲಾಯಿತು.
ಶಾಸಕಿ ರೂಪಕಲಾ ಅವರು ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.5ರಂದು ನಿಗದಿಯಾಗಿರುವ ಚುನಾವಣೆಯಲ್ಲಿ ಅಂತಿಮಗೊಳಿಸಿದ ಅಭ್ಯರ್ಥಿಗಳು ಅವಿರೋಧ ಆಯ್ಕೆಗೊಳ್ಳಲಿದ್ದಾರೆ.ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಹಿಂದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಗಳಿಗೆ ಒಂದೇ ಇತ್ತು. ಅದರ ಪ್ರಥಮ ಅಧ್ಯಕ್ಷರಾಗಿ ಕ್ಯಾಸಂಬಳ್ಳಿ ಕೆ.ಸಿ.ರೆಡ್ಡಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಂದಿನ ದಿನಗಳಲ್ಲೂ ಕೆಜಿಎಫ್ ತಾಲೂಕಿಗೆ ಪ್ರತ್ಯೇಕ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಪ್ರಾರಂಭಗೊಳ್ಳಲಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಜಾರಿಯಲ್ಲಿದೆ ಎಂದು ಹೇಳಿದರು.
ಇದೀಗ ನಿರ್ದೇಶಕರಾಗಿ ಆಯ್ಕೆಗೊಂಡಿರುವವರು ಉತ್ತಮ ಸೇವೆ ಮಾಡಿಕೊಂಡು ಕಾಂಗ್ರೆಸ್ ಬೆಂಬಲಿಗರಾಗಿ ಗುರುತಿಸಿಕೊಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಪಕ್ಷತಿತವಾಗಿ ಎಲ್ಲ ವರ್ಗದ ಜನರಿಗೂ ಬ್ಯಾಂಕ್ನಿಂದ ದೊರಕುವ ಸವಲತ್ತುಗಳನ್ನು ತಲುಪಿಸುವ ಕೆಲಸ ಮಾಡಲಿ ಎಂದು ತಿಳಿಸಿದರು.