ಜಿಲ್ಲೆ

ಅಪರಿಚಿತ ಶವ ಪತ್ತೆ

ರೇಷ್ಮೆ ನಗರ ಡೆಸ್ಕ್

ಕನಕಪುರ: ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಚಿರಂತನ ಶಾಲೆಯ ಸಮೀಪ ತಲೆ ಮೇಲೆ ಕಲ್ಲು ಎತ್ತಿಹಾಕಿ, ಕತ್ತು ಕುಯ್ದ ಸ್ಥಿತಿಯಲ್ಲಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಶನಿವಾರ ಬೆಳಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ, ಸಹಾಯಕ ಅಧಿಕಾರಿ ಸುರೇಶ್, ಸರ್ಕಲ್ ಇನ್‌ಸೆೆಕ್ಟರ್ ವಿಕಾಸ್, ಸಾತನೂರು ಪ್ರಭಾರ ಸಬ್‌ಇನ್‌ಸ್ಪೆಕ್ಟರ್ ದುರ್ಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಶವವನ್ನು ಹಾರೋಹಳ್ಳಿ ದಯಾನಂದ ಸಾಗರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ, ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.