ವಿಜಯವಾಣಿ ಸುದ್ದಿಜಾಲ ಬೈಂದೂರು
ಧರ್ಮಸ್ಥಳ ಯೋಜನೆಯಿಂದ ನೀಡಿದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು. ಒಕ್ಕೂಟ ಪದಾಧಿಕಾರಿಗಳಿಗೆ ಯೋಜನೆಯಲ್ಲಿ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಒಂದು ಭಾಗ್ಯ ಎಂದು ಜಿಲ್ಲಾ ಜನಜಾಗೃತಿ ಸ್ಥಾಪಕ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.
ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆದ ಬೈಂದೂರು ತಾಲೂಕಿನ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇಗೌಡ ಶ್ರೀ ಕ್ಷೇತ್ರದ ಹಿನ್ನೆಲೆ ಬಗ್ಗೆ ವಿವರಿಸಿದರು.
ಬೈಂದೂರು ತಾಲೂಕು ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ವಾಸು ಮೇಸ್ತ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ, ಗೌರವಾಧ್ಯಕ್ಷ ರಘುರಾಮ ಪೂಜಾರಿ, ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಅಧ್ಯಕ್ಷ ಚಂದ್ರ ಪೂಜಾರಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರವೀಣ್ ಮೂವಾಡಿ, ಎಲ್ಲ ವಲಯಾಧ್ಯಕ್ಷರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೈಂದೂರು ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ ಪೈ ಸ್ವಾಗತಿಸಿದರು. ಮೇಲ್ವಿಚಾರಕಿ ಸಂಗೀತಾ ವಂದಿಸಿದರು. ಭರತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯೋಜನೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸುವ ಕಿರುಚಿತ್ರ ಪ್ರದರ್ಶಿಸಲಾಯಿತು.
ಉತ್ತರ ಕನ್ನಡ ಜಿಲ್ಲಾ ನಿರ್ದೇಶಕ ಮಹೇಶ್ ಎಂ.ಡಿ. ದಶಾಂಶ ಮತ್ತು ಯೋಜನೆಯ ಸ್ವಸಹಾಯ ಸಂಘಗಳ ವ್ಯವಸ್ಥೆ ಕುರಿತು ಹಾಗೂ ಬ್ಯಾಂಕ್ ಆಫ್ ಬರೋಡ ತಲ್ಲೂರು ಬ್ರಾಂಚ್ ವ್ಯವಸ್ಥಾಪಕ ಗಿರೀಶ್ ಐತಾಳ್ ಇತರ ವಿಚಾರದ ಮಾಹಿತಿ ನೀಡಿದರು. ವಾಸ್ತು ತಜ್ಞ ಡಾ.ಬಸವರಾಜ್ ಶೆಟ್ಟಿಗಾರ್ ಮಾತನಾಡಿದರು.