ಹುಬ್ಬಳ್ಳಿ : ಭಾರತ ರತ್ನ ಸರ್ದಾರ ವಲ್ಲಭಬಾಯಿ ಪಟೇಲ ಅವರ 150ನೇ ಜಯಂತಿ ಅಂಗವಾಗಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಹಾಗೂ ಪೂರ್ವ ಕ್ಷೇತ್ರದ ವತಿಯಿಂದ ನಗರದಲ್ಲಿ ಶುಕ್ರವಾರ ಏಕತಾ ನಡಿಗೆ ಹಮ್ಮಿಕೊಳ್ಳಲಾಗಿತ್ತು.
ಮೂರುಸಾವಿರ ಮಠದ ಆವರಣದಿಂದ ಆರಂಭಗೊಂಡ ಏಕತಾ ನಡಿಗೆ, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಸಂಪೂರ್ಣ ಭಾರತವನ್ನು ಒಗ್ಗೂಡಿಸುವಲ್ಲಿ ಗೃಹ ಸಚಿವರಾಗಿದ್ದ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಬಾಯಿ ಪಟೇಲ ಅವರ ದಿಟ್ಟಕ್ರಮ ಪ್ರಮುಖವಾದದ್ದು ಎಂದರು.
ಸರ್ದಾರ ವಲ್ಲಭಬಾಯಿ ಪಟೇಲ ಅವರ ಮಾರ್ಗದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಭಾರತ ವಿಶ್ವಕ್ಕೆ ಜಗನ್ಮಾತೆಯಾಗಿ ಬೆಳಗಬೇಕೆಂಬ ಪಟೇಲರ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿ ಯಶಸ್ಸು ಕಂಡಿದ್ದಾರೆ ಎಂದು ಹೇಳಿದರು.
ಮೇಯರ್ ಜ್ಯೋತಿ ಪಾಟೀಲ, ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ ಕೌಜಗೇರಿ, ಶಿವು ಮೆಣಸಿನಕಾಯಿ, ಬೀರಪ್ಪ ಖಂಡೇಕಾರ, ರೂಪಾ ಶೆಟ್ಟಿ, ಉಮಾ ಮುಕುಂದ, ಚಂದ್ರಿಕಾ ಮೇಸ್ತ್ರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸೀಮಾ ಲದ್ವಾ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ, ಪ್ರಮುಖರಾದ ನಾರಾಯಣ ಜರತಾರಘರ, ಸಿದ್ದು ಮೊಗಲಿಶೆಟ್ಟರ, ರವಿ ನಾಯಕ, ವಸಂತ ನಾಡಜೋಶಿ, ಮಂಜುನಾಥ ಚಿಂತಗಿಂಜಲ, ಪ್ರಭು ನವಲಗುಂದಮಠ, ಕೃಷ್ಣಾ ಗಂಡಗಾಳೇಕರ, ಪ್ರವೀಣ ಪವಾರ, ರಾಜು ಕೋರ್ಯುಣಮಠ, ನಾಗರತ್ನಾ ಬಳ್ಳಾರಿ, ಸರೋಜಾ ಛಬ್ಬಿ, ಲೀಲಾವತಿ ಪಾಸ್ತೆ, ಇತರರು ಇದ್ದರು.