ಬೆಳ್ತಂಗಡಿ: ತಾರ್ಕಿಕ ಚಿಂತನೆಯೊಂದಿಗೆ ಗುರುತಿಸಿಕೊಂಡರೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆಯುವಂತಹ ಸಾಧನೆ ಮಾಡಬಹುದು ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಪ್ರೊ.ನಂದ ಕುಮಾರಿ ಕೆ.ಪಿ ಹೇಳಿದರು.
ಶನಿವಾರ ಉಜಿರೆ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನ ಶಾಸ್ತ್ರ ವಿಭಾಗ ಹಾಗೂ ಕಾಂಕೇಮ್ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿಶ್ವನಾಥ ಪಿ.ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ ವಿದ್ಯಾರ್ಥಿಗಳನ್ನು ವಿಜ್ಞಾನ ವಿಷಯಗಳತ್ತ ಆಸಕ್ತಿ ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯ ಬಿ.ಪಿ, ಕಾಂಕೇಮ್ ಕಾರ್ಯದರ್ಶಿ ಡಾ.ನವೀನ್‌ಕುಮಾರ್, ಜಂಟಿ ಕಾರ್ಯದರ್ಶಿ ಡಾ. ಸುಜಯ್.ಎಂ.ಎಂ.ಉಪಸ್ಥಿತರಿದ್ದರು.
ಕಾವ್ಯ ಶೆಟ್ಟಿ ಸ್ವಾಗತಿಸಿ, ಅನನ್ಯ.ಪಿ ವಂದಿಸಿದರು. ವಿದ್ಯಾರ್ಥಿನಿ ರಕ್ಷಾ ನಿರೂಪಿಸಿದರು.