ಜಿಲ್ಲೆ

17ರಂದು ವಿವಿ,ಕಾಲೇಜು ಬಂದ್

ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ

ರಾಜ್ಯದ ಕಾಲೇಜು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಡೆಗಣಿಸಿರುವ ರಾಜ್ಯಸರ್ಕಾರದ ಕಾರ‌್ಯವೈಖರಿ ಖಂಡಿಸಿ ಎನ್‌ಎಸ್‌ಯುಐ ಡಿ. 17ರಂದು ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳ ಬಂದ್‌ಗೆ ಕರೆ ನೀಡಿದೆ ಎಂದು ರಾಜ್ಯ ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿಗಣೇಶ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿೃಸುತ್ತಿದೆ. ಸರ್ಕಾರಿ ಶಾ ಲಾ-ಕಾಲೇಜುಗಳ ಶುಲ್ಕ ಹೆಚ್ಚಿಸುವ ಮೂಲಕ,ಇಡೀ ಶಿಕ್ಷಣ ಕ್ಷೇತ್ರವನ್ನೇ ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಮುಂದಾಗಿದೆ ಎಂ ದು ದೂರಿದ ಅವರು,17ರಂದು ಪಿಯುನಿಂದ ಪಿಜಿಯವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ಇದರಿಂದ ಸರ್ಕಾರ ಎಚ್ಚೆತ್ತು ಸಮಸ್ಯೆ ಗಳನ್ನು ಬಗೆಹರಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಹೇಳಿದರು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿನಯ್ ಗೋಡೆಮನೆ,ಮಮ ತಾ ನೇರಲಗಿ,ರಫೀಕ್,ಅಬ್ದುಲ್‌ಸಲಾಂ,ಅಬ್ದುಲ್‌ರಜಾಕ್,ಪವನ್ ಇದ್ದರು.

-----