ಜಿಲ್ಲೆ

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ : ಡಾ.ಶೇಷಪ್ಪ ಅನಿಸಿಕೆ

ಸೌಮ್ಯ ಆರ್

ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ಹೆಚ್ಚಾದಾಗ ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರುತ್ತಾರೆ. ಬೆಳ್ತಂಗಡಿ ಕಾಲೇಜು ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡುವಂತಾಗಲಿ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ಶೇಷಪ್ಪ ಹೇಳಿದರು.

ಅವರು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಥ್ರೋಬಾಲ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಉಜಿರೆಯ ಲಕ್ಷ್ಮೀ ಗ್ರೂಪ್ಸ್ ಮಾಲೀಕ ಲಕ್ಷ್ಮೀ ಮೋಹನ್ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಬೆಳೆಸಲು ಹಿರಿಯ ವಿದ್ಯಾರ್ಥಿ ಸಂಘ ಕಾಲೇಜಿನೊಂದಿಗೆ ಸಕ್ರಿಯವಾಗಿರುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸುರೇಶ್ ವಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಧಾಕೃಷ್ಣ ಎಚ್.ಬಿ., ಪರಿಶ್ರಮ ಹಾಕುತ್ತಿದ್ದಾರೆ. 2022ರಲ್ಲಿ ಬರುವಾಗ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣ ಮಾಡುವುದರ ಮೂಲಕ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಹಾಗೂ ನಮ್ಮ ಎಲ್ಲ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದಾರೆ ಎಂದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಎಚ್.ಬಿ.ಕ್ರೀಡಾಕೂಟದ ಬಗ್ಗೆ ತಿಳಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವೈಲೆಟ್ ಮೊರಾಸ್, ಉಪಾಧ್ಯಕ್ಷ ಉಸ್ಮಾನ್, ಸ್ನಾತ್ತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ.ಎನ್., ಮೇಲಂತಬೆಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ಹಾಗೂ ಗ್ರಾಪಂ ಸದಸ್ಯರಾದ ಚಂದ್ರರಾಜ, ಕ್ರೀಡಾ ಕಾರ್ಯದರ್ಶಿಗಳಾದ ರೂಪೇಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ.ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕ ಡಾಕ್ಟರ್ ಕುಶಲಪ್ಪ ಎಸ್.ವಂದಿಸಿದರು.