ಜಿಲ್ಲೆ

ವಾಲಿಬಾಲ್ ಪಂದ್ಯಾವಳಿಗೆ ಮೈಸೂರು ವಿವಿ ತಂಡ

ಮೈಸೂರು: ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾವಳಿಗೆ ಮೈಸೂರು ವಿವಿ ತಂಡದ ಆಯ್ಕೆ ಮಾಡಲಾಗಿದೆ.

ತರಬೇತುದಾರ ಎಸ್.ರಮೇಶ್, ತಂಡದ ವ್ಯವಸ್ಥಾಪಕ ಎಸ್.ಜೆ.ಪುಟ್ಟರಾಜು ಜತೆ ತಂಡದ ಸದಸ್ಯರು ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.