ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಹೊಸಮಠದ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮಿಗಳ 104ನೇ ವರ್ಷದ ಪುಣ್ಯಾರಾಧನೆ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಮಾ. 16ರಿಂದ 30ರ ವರೆಗೆ ಏರ್ಪಡಿಸಲಾಗಿದೆ.
ಮಾ. 16ರಂದು ಬೆಳಗ್ಗೆ 10.30ಕ್ಕೆ ಜಾತ್ರಾ ಮಹೋತ್ಸವ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಅತಿಥಿಗಳಾಗಿ ಸಭಾಪತಿ ಬಸವರಾಜ ಹೊರಟ್ಟಿ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎನ್.ಎಚ್. ಕೋನರೆಡ್ಡಿ, ಇತರರು ಉಪಸ್ಥಿತರಿರುವರು.
ಸದ್ಗುರು ಸಿದ್ದೇಶ್ವರ ಸ್ವಾಮಿಗಳ ಹೊಸಮಠದ ಅಧ್ಯಕ್ಷ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸುವರು.
ಮಹೋತ್ಸವ ಅಂಗವಾಗಿ ಬೈಲೂರ ನಿಷ್ಕಲ ಮಂಟಪದ ಶ್ರೀ ನಿಜಗುಣ ಪ್ರಭು ಸ್ವಾಮೀಜಿ ಅವರಿಂದ ಪ್ರವಚನ ಕಾರ್ಯಕ್ರಮ ನಿತ್ಯ ಸಂಜೆ 6ಕ್ಕೆ ಆಯೋಜಿಸಲಾಗಿದೆ. ಮಾ. 16ರಂದು ಸಂಜೆ 6ಕ್ಕೆ ಪ್ರವಚನವನ್ನು ರುದ್ರಾಮಠದ ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.