ಚಿಂಚೋಳಿ: ತಾಲೂಕಿನ ತುಮಕುಂಟಾ ಗ್ರಾಮ ಹೊರವಲಯದಲ್ಲಿ ಅಂದಾಜು 30 ವರ್ಷದ ವ್ಯಕ್ತಿಯನ್ನು ಹತ್ಯೆಗೈಯ್ದು ಮುಳ್ಳಿನ ಪೊದೆಯಲ್ಲಿ ಶವ ಬಿಸಾಕಲಾಗಿದೆ.
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.
ಕೊಲೆಯಾದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪೀಲದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.