ಜಿಲ್ಲೆ

ವಾಹನ ಡಿಕ್ಕಿಯಾಗಿ ಅಪರಿಚಿತ ಸಾವು

ರೇಷ್ಮೆ ನಗರ ಡೆಸ್ಕ್

ಕುದೂರು: ಮಾಗಡಿ & ಗುಡೇಮಾರನಹಳ್ಳಿ ಮುಖ್ಯ ರಸ್ತೆಯ ಸಿಡಿಗನಹಳ್ಳಿ ಗೊಲ್ಲಹಳ್ಳಿ ಗೇಟ್​ ಸಮೀಪ ಮಂಗಳವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬರಿಗೆ ವಾಹನವೊಂದು ಡಿಕ್ಕಿಹೊಡೆದಿದೆ. ಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳಿಯರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯು 40&50 ವರ್ಷ ವಯಸ್ಸಿನವ ಎಂದು ಅಂದಾಜಿಸಲಾಗಿದೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.