ಜಿಲ್ಲೆ

20ರ ವರೆಗೆ ಮದ್ಯ ಮಾರಾಟ ಬಂದ್

ಬೆಳಗಾವಿ: ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಲಾಕ್‌ಡೌನ್‌ಅನ್ನು ಮೇ 3ರ ವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಏ. 15ರಿಂದ ಏ. 20ರ ವರೆಗೆ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡಬೇಕು ಎಂದು ಅಬಕಾರಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರವು ಲಾಕ್‌ಡೌನ್ ಅವಧಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ಅನ್ನು ಕೆಲವೊಂದು ಸ್ಥಳಗಳಲ್ಲಿ ನಿರ್ದಿಷ್ಟ ಮಾರ್ಗಸೂಚಿ ಹೊರಡಿಸಿ, ಏ. 20ರ ನಂತರ ಪುನರ್ ವಿಮರ್ಶಿಸಲು ನಿರ್ಧರಿಸಲಾಗಿದೆ. ಮಾರ್ಚ್ 31ರಂದು ಹೊರಡಿಸಿದ್ದ ಆದೇಶವನ್ನು ಏ. 20ರ ವರೆಗೆ ಮುಂದುವರಿಸಲು ಕ್ರಮ ವಹಿಸಲಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.