ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಂದೆಂದಿಗೂ ಪ್ರಸ್ತುತರಾಗಿದ್ದಾರೆ ಎಂದು ವಿಎಸ್‌ಕೆ ವಿವಿ ಕುಲಸಚಿವ ಎಸ್.ಎನ್.ರುದ್ರೇಶ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ರಾಮಾಯಣದಲ್ಲಿದೆ ಸಮಸ್ಯೆಗಳಿಗೆ ಪರಿಹಾರ
ನಗರದ ವಿಎಸ್‌ಕೆ ವಿವಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಲ್ಮೀಕಿ ರಾಮಾಯಣ 300ಕ್ಕೂ ಹೆಚ್ಚು ಉಪ ರಾಮಾಯಣಗಳನ್ನು ಸೃಷ್ಟಿಸುವಲ್ಲಿ ಪ್ರೇರಣೆಯಾಗಿದೆ.
ವಿವಿಯಲ್ಲಿ ಶ್ರಮಿಕರಿಗೆ ಗೌರವ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಸೌಕರ್ಯ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಇಂತಹ ಆಚರಣೆಗಳು ಅರ್ಥಪೂರ್ಣವಾಗುತ್ತಿರುವುದು ಶಿಕ್ಷಣ ವ್ಯವಸ್ಥೆಗೆ ವಿಶ್ವವಿದ್ಯಾಲಯವು ಸಲ್ಲಿಸುತ್ತಿರುವ ಗೌರವವಾಗಿದೆ ಎಂದರು.
ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮೀ ನಾಯಕ್, ಕುಲಸಚಿವ ಪ್ರೊ.ರಮೇಶ ಓಲೇಕಾರ್, ಡಾ.ಎಚ್.ತಿಪ್ಪೇಸ್ವಾಮಿ, ಪ್ರೊ.ರಾಬರ್ಟ್ ಜೋಸ್ ಮಾತನಾಡಿದರು.