ರಾಯಚೂರು: ರಾಯಚೂರು ಸೇರಿದಂತೆ ರಾಜ್ಯದ ಹಾಸನ ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ತಿಳಿಸಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ಮೂರು ನಗರಸಭೆಗಳನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡುವಂತೆ ಬಹಳ ದಿನಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಗಳು ಅದಕ್ಕೆ ಅನುಮೋದನೆ ನೀಡಲು ನಿರ್ಧರಿಸಿದ್ದು, ಶೀಘ್ರದಲ್ಲಿ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಮಧ್ಯಾಹ್ನ ನಮಾಜ್‌ಗೆ ಅನುಕೂಲ ಮಾಡಲು ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮಯ ಬದಲಾವಣೆ ಮಾಡಲಿಗೆ ಎನ್ನುವ ನಾಯಕ ಆರೋಪಕ್ಕೆ ಸಂಬಂಸಿದಂತೆ ನಾವು ಯಾರಿಗೂ ಓಲೈಕೆ ಮಾಡಲ್ಲ. ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದು, ಲೋಕಸಭೆ ಚುನಾವಣೆ ಹತ್ತಿರವಾಗಿರುವುದರಿಂದ ಬಿಜೆಪಿಯವರು ಸಣ್ಣಪುಟ್ಟ ವಿಚಾರಗಳನ್ನು ಮುಂದಿಟ್ಟು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ.
ಬಿಜೆಪಿ ನಾಯಕರು ನೀಡುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿದ್ದು, ಸಣ್ಣಪುಟ್ಟ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮನಸ್ಸನ್ನು ಬೇರೆಡೆ ತಿರುಗಿಸಲು ಹೋರಟಿದ್ದಾರೆ. ಕಳೆದ 10 ವರ್ಷಗಳಿಂದ ಸರ್ಕಾರ ಅಚ್ಚೆದಿನ್ ನೀಡುತ್ತೇವೆ ಎಂದು ಹೇಳುತ್ತಾ ಬಂದಿದ್ದು, ಅಚ್ಚೆದಿನ್ ಎಲ್ಲಿದೆ ಎಂದು ತೋರಿಸಲಿ.
ಜಿಲ್ಲೆಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆಗಾಗಿ ಎಸ್‌ಎಂಪಿಎಲ್ ಸಂಸ್ಥೆಗೆ 79 ಕೋಟಿ ರೂ. ಟೆಂಡರ್ ನೀಡಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸುವಲ್ಲಿ ಸಂಪೂರ್ಣ ವಿಲವಾಗಿದೆ. ನಗರದ 35 ವಾರ್ಡ್‌ಗಳಲಿ ಕೇವಲ ಐದು ವಾರ್ಡ್‌ಗಳಿಗೆ ಮಾತ್ರ ನೀರು ಪೂರೈಕೆಯಾಗುತ್ತಿದೆ.
ಕುಡಿಯುವ ನೀರಿಗೆ ಸಂಬಂಸಿದಮತೆ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಅಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಕಾರಿಗೆ ಸೂಚನೆ ನೀಡಲಾಗುವುದು. ಜತೆಗೆ ಅವೇಶನ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅಕಾರಿಗಳ ಸಭೆ ನಡೆಸಲಾಗುವುದು ಎಂದು ರಹೀಂ ಖಾನ್ ತಿಳಿಸಿದರು.
ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯ ನಾಯಕ, ಜಿಲ್ಲಾಕಾರಿ ಚಂದ್ರಶೇಖರ ನಾಯಕ ಉಪಸ್ಥಿತರಿದ್ದರು.