ಜಿಲ್ಲೆ

ಉಪ್ಪಾರ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ

ವಿಜಯಪುರ : ಜಿಲ್ಲಾ ಉಪ್ಪಾರ ಸೇವಾ ಸಂಘ ಹಾಗೂ ಜಿಲ್ಲಾ ಉಪ್ಪಾರ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಅ. ೨೬ರಂದು ಬೆಳಗ್ಗೆ ೧೧ಕ್ಕೆ ಪ್ರಸಕ್ತ ಸಾಲಿನ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರ, ಹೊಸ ನೇಮಕಾತಿ ಹೊಂದಿದ ನೌಕರರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರ ಸನ್ಮಾನ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶ್ರೀ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ನೆರವೇರಿಸುವರು. ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ, ಮಾಜಿ ಕೃಷ್ಣಾ ಕಾಡಾ ಅಧ್ಯಕ್ಷ ಜಕ್ಕಪ್ಪ ಯಡವೆ ಅಧ್ಯಕ್ಷತೆ ವಹಿಸುವರು.

ಹೊಸದುರ್ಗ ವಿದ್ಯಾನಗರ ಚನ್ಮೂಲಾದ್ರಿ ತಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಚಿಕ್ಕಲಕ್ಕಿ ಕ್ರಾಸ್‌ನ ಸಾಧನ ತಪೋವನದ ಶಿವಾನಂದ ಸ್ವಾಮೀಜಿ ಹಾಗೂ ಪಂಢರಪುರದ ವಿಶ್ವಕೃಪ ಆಶ್ರಮದ ಮಾತೋಶ್ರೀ ಶಾಂತಮ್ಮನವರು ಸಾನ್ನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಪುಟ್ಟರಂಗಶೆಟ್ಟಿ, ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿ.ಪ. ಸದಸ್ಯ ಸುನೀಲಗೌಡ ಪಾಟೀಲ, ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಸೋಮಶೇಖರ ಬಂಡಿ, ಅನೀಲ ಅವಳೆ, ವೆಂಕೋಬಾ, ಪುಂಡಲೀಕ ಉಪ್ಪಾರ ಸೇರಿ ಮತ್ತಿತರರು ಭಾಗವಹಿಸುವರು ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಕಾರ್ಯದರ್ಶಿ ಸಿದ್ದು ಗೇರಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.