ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ 48ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಸಮಿತಿಯ ಮಾಜಿ ಅಧ್ಯಕ್ಷ ಎನ್.ಗೋಪಾಲ ಹೆಗ್ಡೆ ಬಿಡುಗಡೆಗೊಳಿಸಿದರು.
ಇಲ್ಲಿನ ಶ್ರೀ ಗುರು ಸುಧೀಂದ್ರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ ಹೆಗ್ಡೆ, ಉಪಾಧ್ಯಕ್ಷ ಯತೀಶ್ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಶರತ್ ಕೋಟೆ, ಕೀರ್ತನ್ ಕುಮಾರ್ ಶೆಟ್ಟಿ, ವಿದ್ಯಾಧರ ಜೈನ್, ಪುರುಷೋತ್ತಮ ಮುಂಗ್ಲಿಮನೆ, ಸೂರಜ್ ಹೆಗ್ಡೆ, ಕಂಗ್ವೆ ವಿಶ್ವನಾಥ ಶೆಟ್ಟಿ, ಕೆ.ಬಾಲಕೃಷ್ಣ ರೈ, ಚಂದ್ರಶೇಖರ್ ಆಚಾರ್ಯ, ಅಶೋಕ್ ಕುಮಾರ್ ರೈ ಎ, ರಾಮಚಂದ್ರ ಮಣಿಯಾಣಿ, ಎನ್.ಹರೀಶ್ ನಾಯಕ್, ಕೆ.ಜಗದೀಶ್ ಶೆಟ್ಟಿ, ರವೀಶ್ ಎಚ್.ಟಿ, ಶಶಿಧರ್ ಶೆಟ್ಟಿ, ವೆಂಕಟೇಶ್ ಶೆಣೈ, ಉಷಾಚಂದ್ರ ಮುಳಿಯ, ಮಾಧವಿ ಬಿ.ರೈ, ಕೃಷ್ಣಪ್ರಸಾದ್ ದೇವಾಡಿಗ ಮೊದಲಾದವರು ಭಾಗವಹಿಸಿದ್ದರು.