ಜಿಲ್ಲೆ

ಉಪ್ಪಿನಂಗಡಿಯಲ್ಲಿ ಟ್ಯಾಂಕರ್ ಡಿಕ್ಕಿಯಾಗಿ ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿ: ಇಲ್ಲಿನ ನಟ್ಟಿಬೈಲು ಪೆಟ್ರೋಲ್ ಪಂಪು ಬಳಿ ಟ್ಯಾಂಕರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ತಾಯಿ ಜತೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಅದ್ವಿತ್ (15) ಸಾವನ್ನಪ್ಪಿದ್ದಾನೆ.

ದ್ವಿಚಕ್ರವಾಹನದಲ್ಲಿ ಅಂಗನವಾಡಿ ಕಾರ್ಯಕರ್ತೆ ಅನುರಾಧಾ ಇಬ್ಬರು ಮಕ್ಕಳಾದ ಅಶ್ವಿತ್ ಮತ್ತು ಅದ್ವಿತ್‌ನೊಂದಿಗೆ ಪ್ರಯಾಣಿಸುತ್ತಿದ್ದರು.
ನಟ್ಟಿಬೈಲ್‌ನಲ್ಲಿಇವರು ಸಂಚರಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದೆ. ಅದ್ವಿತ್ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಶ್ವಿತ್ ಮತ್ತು ಅನುರಾಧಾ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.