ಉಪ್ಪಿನಂಗಡಿ: ಉದ್ಯೋಗದ ಕೊರತೆಗಿಂತಲೂ ಕೌಶಲದ ಕೊರತೆ ಎಲ್ಲೆಡೆ ಇದೆ. ನಮ್ಮಲ್ಲಿ ಕ್ರಿಯಾಶೀಲತೆ, ಪ್ರಾಮಾಣಿಕತೆ ಮತ್ತು ಸತತ ಪ್ರಯತ್ನ ಇದೆ ಎಂದಾದರೆ ಯಶಸ್ಸು ನಮ್ಮತ್ತ ಒಲಿದು ಬರುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.
ನಿವೃತ್ತ ಪ್ರಾಚಾರ್ಯ, ಸಾಹಿತಿ ಡಾ.ಪ್ರಭಾಕರ ಶಿಶಿಲ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಮಾತನಾಡಿದರು. ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಅತ್ರಮಜಲು, ಕಾಲೇಜಿನ ವಿವಿಧ ಸಮಿತಿಯ ಸಂಚಾಲಕ ದಶರಥ ಕೆ.ಟಿ, ಹುಚ್ಚೇಗೌಡ ಎಚ್., ಪ್ರವೀಣ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಡಾ.ರಾಜಾರಾಮ್, ಎ.ಕೃಷ್ಣ ರಾವ್ ಅರ್ತಿಲ, ಅಶ್ರಫ್ ಬಸ್ತಿಕ್ಕಾರ್, ಇಸ್ಮಾಯಿಲ್ ಇಕ್ಬಾಲ್, ಶಾಂಭವಿ ರೈ, ಸವಿತಾ ಹರೀಶ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಸ್ವಾಗತಿಸಿದರು. ಉಪನ್ಯಾಸಕ ರವಿರಾಜ ಎಸ್. ವಂದಿಸಿದರು. ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಎಂ.ಎ ಪರೀಕ್ಷೆಯಲ್ಲಿ ಪ್ರಥಮ ರ‌್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ, ರಾಷ್ಟ್ರಮಟ್ಟದ ಕ್ರೀಡಾಪಟು ರೋಹಿತ್, ಡಾಕ್ಟರೇಟ್ ಪದವಿ ಪಡೆದಿರುವ ಉಪನ್ಯಾಸಕರಾದ ಹರಿಪ್ರಸಾದ್, ದಿವ್ಯಶ್ರೀ ಅವರನ್ನು ಸನ್ಮಾನಿಸಲಾಯಿತು. ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಹೆಸರು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.