ಕೊಪ್ಪಳದ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಕಾರ್ಯಕ್ರಮವನ್ನು ಡಾ.ಕೆ.ಬಸವರಾಜ ಉದ್ಘಾಟಿಸಿದರು. ಡಾ.ಅನಿರುದ್ಧ ಕುಷ್ಟಗಿ, ಡಾ.ಪ್ರವೀಣ ಕುಮಾರ್, ಡಾ.ಬಸವರಾಜ ಸವಡಿ ಇತರರಿದ್ದರು.  
ಜಿಲ್ಲೆ

ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡಲು ಮುಂದಾಗಿ: ಡಾ.ಕೆ.ಬಸವರಾಜ ಸಲಹೆ

Gangavati - Desk - Veeresh S Ullagaddi

ಕೊಪ್ಪಳ: ಯುವ ವೈದ್ಯರು ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ಮಾಡಲು ಮುಂದಾಗಬೇಕು ಎಂದು ಕೆ.ಎಸ್.ಆಸ್ಪತ್ರೆ ಮುಖ್ಯಸ್ಥ ಡಾ.ಕೆ.ಬಸವರಾಜ ಹೇಳಿದರು.


ನಗರದ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಇಂದಿಗೂ ವೈದ್ಯರ ಕೊರತೆ ಕಾಡುತ್ತಿದೆ. ಉತ್ತಮ ಆರೋಗ್ಯ ಸೇವೆಗಳು ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಯುವ ವೈದ್ಯರು ಗ್ರಾಮೀಣ ಭಾಗಕ್ಕೆ ತೆರಳಿ ಸೇವೆ ಆರಂಭಿಸುವಂತೆ ಸಲಹೆ ನೀಡಿದರು.


ಕಿಮ್ಸ್ ವೈದ್ಯ ಡಾ.ಅನಿರುದ್ಧ ಕುಷ್ಟಗಿ ಮಾತನಾಡಿ, ಪ್ರತಿಯೊಬ್ಬರೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೈಜೋಡಿಸುವಂತೆ ಮನವಿ ಮಾಡಿದರು. ಕಾಲೇಜು ನಿರ್ಡಾದೇಶಕ .ಪ್ರವೀಣಕುಮಾರ್, ಪ್ರಾಚಾರ್ಯ ಡಾ.ಬಸವರಾಜ ಸವಡಿ ಮಾತನಾಡಿದರು. ವಿದ್ಯಾರ್ಥಿಗಳು ಅಭಿಪ್ರಾಯ ಹಂಚಿಕೊಂಡರು.