ಜಿಲ್ಲೆ

ನಿರ್ದಿಷ್ಟ ಗುರಿ ಸಾಧನೆ ಮಾಡುವ ಪ್ರಗತಿಬಂಧು ತಂಡಗಳು : ಶಿವಶಂಕರ್ ನಾಯಕ್ ವಿಶ್ಲೇಷಣೆ

ಸೌಮ್ಯ ಆರ್

ಬೆಳ್ತಂಗಡಿ: ನಿರ್ದಿಷ್ಟ ಗುರಿ ಸಾಧನೆ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಉದ್ಯಮಿ ಶಿವಶಂಕರ್ ನಾಯಕ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಉರುವಾಲು ಹಾಗೂ ಪದ್ಮುಂಜಾ ಒಕ್ಕೂಟಗಳ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಯೋಜನೆ ದ.ಕ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರಿಟೆಬಲ್ ಟ್ರಸ್ಟ್ ಮೂಲಕ ಜನರ ಸೇವೆ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ, ಅನುದಾನಗಳನ್ನೂ ಒದಗಿಸುವ ಮೂಲಕ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ತನ್ನ ಕೊಡುಗೆ ನೀಡುತ್ತಿದೆ ಎಂದರು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷ ದಾಸಪ್ಪ ಗೌಡ ಕೊಡ್ಯಡ್ಕ, ಕಾರ್ಯಾಧ್ಯಕ್ಷ ಸುನೀಲ್ ಗೌಡ ಅಣವು, ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ರಮಾನಂದ ಪೂಜಾರಿ, ಅಧ್ಯಕ್ಷ ಗಿರಿಧರ ಗೌಡ, ಈಶ್ವರ ಗೌಡ, ಶ್ರೀವರಮಹಾಲಕ್ಷ್ಮೀ ಪೂಜೆ ಸಮಿತಿ ಅಧ್ಯಕ್ಷೆ ಲಲಿತಾ ಎಸ್, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉರುವಲು ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಕೆ.ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕ ಶಿವಾನಂದ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸೀತಾರಾಮ ನಿರೂಪಿಸಿದರು. ಪಡ್ಮುಂಜ ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ತಾರಾ ವರದಿ ಮಂಡಿಸಿದರು.