ಜಿಲ್ಲೆ

ಪರ್ಯಾಯ ಸಂಯುಕ್ತ ರಸಗೊಬ್ಬರ ಬಳಸಿ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ರೈತರು ಕೇವಲ ಒಂದೆರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ಬಳಸುವುದು ರೂಢಿಗತವಾಗಿದೆ. ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯ ಇವೆ. ರೈತರು ಪರ್ಯಾಯ ಸಂಯುಕ್ತ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಪರ್ಯಾಯ ಸಂಯುಕ್ತ ರಸಗೊಬ್ಬರಗಳನ್ನು ಸಂಯೋಜನೆಯೊAದಿಗೆ ಬಳಸಬಹುದು. ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕು. ಅಲ್ಲದೆ, ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡಬಾರದು. ಡಿಎಪಿ ರಸಗೊಬ್ಬರಕ್ಕೆ ಪಯÁðಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನೂ ಬಳಸಬಹುದು. ಮಾಹಿತಿಗೆ ಹತ್ತಿರದ ರೈತ ಸಂರ್ಕ ಕೇಂದ್ರ ಅಥವಾ ಕೃಷಿ ಇಲಾಖೆ ಅಽಕಾರಿಗಳನ್ನು ಸಂರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.