ವಿಜಯಪುರದ ಬಿ.ಎಲ್​ಡಿಇ ಡೀಮ್ಡ್​ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್​. ಅಂಬೇಡ್ಕರ್​ ಜಯಂತಿ ಆಚರಿಸಲಾಯಿತು. ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಡಾ. ಎಸ್​.ವಿ. ಪಾಟೀಲ, ಡಾ. ಎಂ.ಎಂ. ಪಾಟೀಲ ಮತ್ತಿತರರಿದ್ದಾರೆ. 
ಜಿಲ್ಲೆ

ಜವಾಬ್ದಾರಿಯಿಂದ ಹಕ್ಕು ಬಳಸಿ

ಗಿರೀಶ ಸಗರ

ವಿಜಯಪುರ : ಡಾ. ಬಾಬಾಸಾಹೇಬ್​ ಅಂಬೇಡ್ಕರ್​ ಅವರು ನಮಗೆ ನೀಡಿರುವ ಹಕ್ಕುಗಳನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ಬಿಎಲ್​ಡಿಇ ಡೀಮ್ಡ್​ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ ಹೇಳಿದರು.

ನಗರದ ಬಿಎಲ್​ಡಿಇ ಡೀಮ್ಡ್​ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ಜಯಂತಿ ಅಂಗವಾಗಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಡಾ. ಅಂಬೇಡ್ಕರ್​ ಅವರು ದೇಶದಲ್ಲಿ ಮಾನವ ಹಕ್ಕುಗಳು ಮತ್ತು ಅಸ್ಪಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿದ್ದಾರೆ. ಈ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ತಿಳಿಸಿದರು.

ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯ ಡಾ. ರುವೀರ ಕುಲಕರ್ಣಿ ಅಂಬೇಡ್ಕರ್​ ಅವರ ಸಮಾನತೆ ಮತ್ತು ಸಮಾಜದ ಶೋಷಿತ ವರ್ಗದ ಹಕ್ಕುಗಳ ಕುರಿತು ಮಾತನಾಡಿದರು.

ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಅಲೈಡ್​ ಹೆಲ್ತ್​ ಸೈನ್ಸ್​ ಡೀನ್​ ಡಾ. ಎಸ್​.ವಿ. ಪಾಟೀಲ, ಡಾ. ಎಂ.ಎಂ. ಪಾಟೀಲ, ಡಾ. ಆನಂದ ಅಂಬಲಿ, ಡಾ. ಉದಯಕುಮಾರ ನುಚ್ಚಿ, ಡಾ. ಶ್ರೀಧರ ಬಗಲಿ ಮತ್ತಿತರರಿದ್ದರು.