ಅರಸೀಕೆರೆ: ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಸಮಾಜದಲ್ಲಿರುವ ಸಂಘ, ಸಂಸ್ಥೆಗಳು ನೀಡುವ ನೆರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಸಿ.ಗಿರೀಶ್ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಫೆಡರಲ್ ಬ್ಯಾಂಕ್ ವತಿಯಿಂದ ಕೊಡುಗೆ ನೀಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಮನಗಂಡಿರುವ ಸರ್ಕಾರ ಉಚಿತ ಬಿಸಿಯೂಟ, ಸಮವಸ್ತ್ರ, ವಿದ್ಯಾರ್ಥಿ ವೇತನ, ಪಠ್ಯಪುಸ್ತಕ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುತ್ತಿವೆ. ಇದರೊಂದಿಗೆ ಸಂಘ, ಸಂಸ್ಥೆಗಳು ಮಕ್ಕಳ ಕಲಿಕೆಗೆ ನೆರವಾಗುತ್ತಿರುವುದು ಶ್ಲಾಘನೀಯ. ಸರ್ಕಾರ ಹಾಗೂ ಸಂಘ, ಸಂಸ್ಥೆಗಳ ನೆರವು ಪಡೆದು ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲ ರೇಣುಕಾರಾಧ್ಯ, ಎನ್‌ಎಸ್‌ಎಸ್ ಅಧಿಕಾರಿ ಗೋವಿಂದರಾಜ್, ಡಿ.ಬಿ ಮೋಹನ್ ಕುಮಾರ್, ಗಂಗಾಧರಪ್ಪ, ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು.