ರಾಯಚೂರು: ಪರಿಶಿಷ್ಟ ಜಾತಿ, ಪಂಗಡದ ಉಪ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅನುದಾನ ಕೈತಪ್ಪಿ ಹೋಗದಂತೆ ಕ್ರಮಕೈಗೊಳ್ಳಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಲ ನಿರ್ಮಲ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವು ಇಲಾಖೆಗಳು ಅನುದಾನವನ್ನು ಬಳಸದೆ ಬಾಕಿ ಉಳಿಸಿಕೊಂಡಿದ್ದು, ಪೂರ್ಣಪ್ರಮಾಣದಲ್ಲಿ ಅನುದಾನ ಬಳಕೆಗೆ ಮುಂದಾಗಬೇಕು ಎಂದರು.
ರಾಜ್ಯದಿಂದ ನೀಡಲಾದ ನಮೂನೆಯಂತೆ ವರದಿಯನ್ನು ಸಿದ್ಧಪಡಿಸಿ ಅಕೃತ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬೇಕು. ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸಂಬಂಸಿದ ಅಕಾರಿಗಳಿಗೆ ಸೂಕ್ತ ಸೂಚನೆ ನೀಡಬೇಕು.
ಜಿಲ್ಲೆಯ 32 ಇಲಾಖೆಯಲ್ಲಿ ಎಸ್‌ಸಿಪಿ ಯೋಜನೆಯಡಿ 201 ಕೋಟಿ ರೂ. ಹಂಚಿಕೆಯಾಗಿದ್ದು, ಅದರಲ್ಲಿ 138 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 127 ಕೋಟಿ ರೂ. ಖರ್ಚು ಮಾಡಲಾಗಿದೆ. ಟಿಎಸ್‌ಪಿ ಯೋಜನೆಯಡಿ 89.50 ಕೋಟಿ ರೂ. ಹಂಚಿಕೆಯಾಗಿದ್ದು, 64.50 ಕೋಟಿ ರೂ. ಬಿಡುಗಡೆಯಾಗಿದೆ. 55.18 ಕೋಟಿ ರೂ. ಖರ್ಚು ಮಾಡಲಾಗಿದೆ.
ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಎಸ್‌ಸಿಪಿ ಯೋಜನೆಯಡಿ ಶೇ.91.94ರಷ್ಟು ಹಾಗೂ ಟಿಎಸ್‌ಪಿ ಯೋಜನೆಯಡಿ ಶೇ.85.55ರಷ್ಟು ಅನುದಾನ ಖರ್ಚು ಮಾಡಲಾಗಿದೆ. ಕೂಡಲೇ ಸಂಬಂಸಿದ ಅಕಾರಿಗಳು ನಿಗದಿತ ಅವಗಳಿಗೆ ಹಂಚಿಕೆಯಾದ ಅನುದಾನ ಬಳಕೆಗೆ ಕ್ರಮಕೈಗೊಳ್ಳಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಉಪಸ್ಥಿತರಿದ್ದರು.