ಕಂಪ್ಲಿಯಲ್ಲಿ ತಹಸಿಲ್ ಕಚೇರಿಯ ಕಂದಾಯ ನಿರೀಕ್ಷಕ ಎ.ಗಣೇಶ್‌ಗೆ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.  
ಜಿಲ್ಲೆ

ಉತ್ತರ ಪ್ರದೇಶದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆ ಅತ್ಯಾಚಾರ, ಕೊಲೆಗೆ ಖಂಡನೆ: ಕಂಪ್ಲಿಯಲ್ಲಿ ಮಹಿಳಾ ಮುನ್ನಡೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ

ಕಂಪ್ಲಿ: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಮಹಿಳಾ ಮುನ್ನಡೆ ಸಂಘಟನೆ ನೇತೃತ್ವದಲ್ಲಿ ಶನಿವಾರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಮಹಿಳಾ ಮುನ್ನಡೆ ಸಂಘಟನೆ ಜಿಲ್ಲಾ ಸಂಚಾಲಕಿ ಮಾಲನ್ ಬೀ ಮಾತನಾಡಿ, ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಒದಗಿಸುಲ್ಲಿ ವಿಫಲವಾದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತಾಗಬೇಕು. ಅತ್ಯಾಚಾರ, ಹಿಂಸೆ, ದೌರ್ಜನ್ಯಗಳಿಗೆ ಪ್ರೇರಕವಾಗುವ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಬೇಕು. ಮಹಿಳಾ ರಕ್ಷಣೆಗೆ ಉಭಯ ಸರ್ಕಾರ ಬದ್ಧತೆ ತೋರಬೇಕು ಎಂದು ಒತ್ತಾಯಿಸಿದರು. ಬಳಿಕ ತಹಸಿಲ್ ಕಚೇರಿಯ ಕಂದಾಯ ನಿರೀಕ್ಷಕ ಎ.ಗಣೇಶ್‌ಗೆ ಮನವಿ ಸಲ್ಲಿಸಲಾಯಿತು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಕರಿಯಪ್ಪ ಗುಡಿಮನಿ, ವಸಂತರಾಜ್ ಕಹಳೆ, ಪಿ.ಯುಗಂಧರನಾಯ್ಡು, ನೀಲಪ್ಪ ಪೇಂಟರ್, ಶಾಂತಪ್ಪ ಪೂಜಾರಿ, ಇ.ಧನಂಜಯ, ಸುಗ್ಗೇನಹಳ್ಳಿ ಹನುಮಂತಪ್ಪ, ವಿ.ಬಿ.ಶ್ರೀನಿವಾಸ್, ಬಸಪ್ಪ, ಕೆ.ಎನ್.ಪದ್ಮಾವತಿ, ಸಲೀಂ ಬರಗೂರು, ಟಿ.ಎಂ.ಭುವನ್‌ಕುಮಾರ್, ಎಚ್.ಎಂ.ಸಂತೋಷ್ ಇತರರಿದ್ದರು.