ಭಗವದ್ಗೀತಾ ಸ್ಪರ್ಧೆಯಲ್ಲಿ ವಿಜೇತರಾದ ಕುಮಟಾದ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರು. 
ಉತ್ತರ ಕನ್ನಡ

ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಸಾಧನೆ

ಕುಮಟಾ: ಭಟ್ಕಳ ಎಜುಕೇಶನ್ ಟ್ರಸ್ಟ್ ಹಾಗೂ ಗಜಾನನ ಗಣಪತಿ ಕೊಲ್ಲೆ ರಾಯ್ಕರ್ ಫೌಂಡೇಶನ್ ಆಯೋಜಿಸಿದ್ದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ, ಇಲ್ಲಿನ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆಯುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ಶ್ರೇಯಾ ರವೀಂದ್ರ ಕಿಣಿ ಪ್ರಥಮ, ಮಧುಶ್ರವ ಶರ್ಮಾ ದ್ವಿತೀಯ, ವಿಧಾತ್ರಿ ಬಿ. ಮತ್ತು ದೀಪಿಕಾ ಮಹೇಶ ಭಟ್ಟ ತೃತೀಯ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ಭಟ್ಕಳದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.