ಯಲ್ಲಾಪುರದ ಕಾಳಮ್ಮನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ರಂಜಿತಾ ಅವರನ್ನು ಆಟೋ auto rickshaw ದಲ್ಲಿ ಆಸ್ಪತ್ರೆಗೆ ಸಾಗಿಸಿ, ಬದುಕಿಸಲು ಪ್ರಯತ್ನಿಸಿದ ಆಟೋ ಚಾಲಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಬೋವಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಾಜ್ಯ ಅಧ್ಯಕ್ಷ ಶೇಖರಯ್ಯ ಮಠಪತಿ, ಸಂಘದ ತಾಲೂಕಾಧ್ಯಕ್ಷ ವಿಜಯ ಮಿರಾಶಿ, ಜಿಲ್ಲಾಧ್ಯಕ್ಷ ವಿಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ, ಇತರರಿದ್ದರು. 
ಉತ್ತರ ಕನ್ನಡ

ಆಟೋ ರಿಕ್ಷಾ ಪರ್ಮಿಟ್ auto rickshaw permits ವ್ಯಾಪ್ತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಿ

ಯಲ್ಲಾಪುರ: ತಮ್ಮ ವಿವಿಧ ಬೇಡಿಕೆ ಈಡೇರಿಸಬೇಕು auto rickshaw permits ಎಂದು ಉತ್ತರ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘದವರು ಪಟ್ಟಣದಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿ, ಆಟೋ ಚಾಲಕರಿಗಾಗಿ ನಿಗಮ ಸ್ಥಾಪನೆ ಮಾಡಿದರಷ್ಟೇ ಸಾಲದು. ಅಪಘಾತದಲ್ಲಿ ಮೃತಪಟ್ಟ ಚಾಲಕರ ಕುಟುಂಬದವರಿಗೆ ಕನಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು.
ಎರಡಕ್ಕಿಂತ ಹೆಚ್ಚಿನ ಪರ್ಮಿಟ್ ಹೊಂದಿರುವ ಆಟೋ ರಿಕ್ಷಾ ಮಾಲಕರ ಮೇಲೆ ಕ್ರಮ ಕೈಗೊಳ್ಳಬೇಕು. ಕನಿಷ್ಠ 5 ವರ್ಷಗಳ ಕಾಲ ಹೊಸ ಪರ್ಮಿಟ್ ನೀಡುವುದನ್ನು ನಿಲ್ಲಿಸಬೇಕು. ಜಿಲ್ಲಾ ಕೇಂದ್ರದ ಸ್ಥಳದಲ್ಲಿಯೇ ಪರ್ಮಿಟ್ ನೀಡುವ ಪದ್ಧತಿಯನ್ನು ಜಾರಿಗೆ ತರಬೇಕು.
ಬೇರೆ ಜಿಲ್ಲೆಗಳಲ್ಲಿ ಪರ್ಮಿಟ್ ವ್ಯಾಪ್ತಿಯು ಹೆಚ್ಚಿಗೆ ಇರುವಂತೆ ನಮ್ಮ ಜಿಲ್ಲೆಯಲ್ಲೂ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ 50 ಕಿಲೋ ಮೀಟರ್‌ವರೆಗೆ ಪರ್ಮಿಟ್ ವ್ಯಾಪ್ತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕಾಳಮ್ಮನಗರದಲ್ಲಿ ಹಲ್ಲೆಗೊಳಗಾದ ರಂಜಿತಾ ಅವರನ್ನು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿ, ಬದುಕಿಸುವ ಪ್ರಯತ್ನ ಮಾಡಿದ ಆಟೋ ಚಾಲಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಬೋವಿ ಅವರನ್ನು ಸಂಘದಿಂದ ಗೌರವಿಸಲಾಯಿತು.
ಸಂಘದ ತಾಲೂಕಾಧ್ಯಕ್ಷ ವಿಜಯ ಮಿರಾಶಿ, ಜಿಲ್ಲಾಧ್ಯಕ್ಷ ವಿಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಾಬಾಸಾಬ ಜಮಾದಾರ ದಾಂಡೇಲಿ, ರಾಬರ್ಟ್ ಲೊಬೊ ಮುಂಡಗೋಡ, ಯಲ್ಲಾಪುರದ ಶಿವಾನಂದ ಖಾನಾಪುರ, ಸಂದೀಪ ವಡ್ಡರ ಇತರರಿದ್ದರು.