ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಯಲ್ಲಾಪುರದ ಅಂಬೇಡ್ಕರ್ ಸರ್ಕಲ್ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಮಾತನಾಡಿದರು. ವಿ.ಎಸ್. ಭಟ್ಟ ಉಪಳೇಶ್ವರ, ರವಿ ಭಟ್ಟ ಬರಗದ್ದೆ, ಗಣೇಶ ಹೆಗಡೆ, ಉಲ್ಲಾಸ ಶಾನಭಾಗ, ಆರ್.ಎಸ್. ಭಟ್ಟ, ಟಿ.ಸಿ. ಗಾಂವ್ಕರ ವಜ್ರಳ್ಳಿ, ಇತರರಿದ್ದರು .  
ಉತ್ತರ ಕನ್ನಡ

Congress Protest - ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಯಲ್ಲಾಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರು (Congress Protest) ಶುಕ್ರವಾರ ಪ್ರತಿಭಟನೆ ನಡೆಸಿದರು.
 ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಮಾತನಾಡಿ, ಕೇಂದ್ರ ಸರ್ಕಾರದ ವಿಫಲತೆಯಿಂದಾಗಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸರ್ಕಾರ ವಿದ್ಯಾರ್ಥಿಗಳ  ಭವಿಷ್ಯದ ಜತೆಗೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು. ಇದಕ್ಕೆ ಸಂಬಂಧಿತ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
  ಪೆಟ್ರೋಲ್, ಡೀಸೆಲ್‌, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರ ಬದುಕು ಇಕ್ಕಟ್ಟಿಗೆ ಸಿಲುಕಿದೆ. ಕೃಷಿಗೆ ಪೂರಕ ಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ ಅವರು, ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ ಉಪಳೇಶ್ವರ, ರವಿ ಭಟ್ಟ ಬರಗದ್ದೆ ಮಾತನಾಡಿದರು.  ಯುವ ಕಾಂಗ್ರೆಸ್ ಅಧ್ಯಕ್ಷ ಗಣೇಶ ಹೆಗಡೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ, ಪ್ರಮುಖರಾದ ಆರ್.ಎಸ್. ಭಟ್ಟ, ಟಿ.ಸಿ. ಗಾಂವ್ಕರ ವಜ್ರಳ್ಳಿ, ವಿಜಯ್ ಮಿರಾಶಿ, ಎನ್.ಕೆ. ಭಟ್ಟ ಮೆಣಸುಪಾಲ್, ಸತೀಶ ನಾಯ್ಕ, ಮಹೇಶ ನಾಯ್ಕ, ಅನಿಲ್ ಮರಾಠೆ, ನರಸಿಂಹ ಬೋಳಪಾಲ್, ಸುಬ್ಬಣ್ಣ ್ಕುಂಟೆಗಾಳಿ, ಪೂಜಾ ನೇತ್ರೇಕರ, ಮುಶರತ್ ಖಾನ್, ಗಣೇಶ ಹೆಗಡೆ ನಂದೊಳ್ಳಿ ಇತರರು ಭಾಗವಹಿಸಿದ್ದರು.