ಶಿವರಾಮ ಹೆಬ್ಬಾರ 
ಉತ್ತರ ಕನ್ನಡ

Janavara ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಹೆಬ್ಬಾರ ಖಂಡನೆ

ಯಲ್ಲಾಪುರ: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಕೆಲವು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ Janavara ತೆಗೆಸಿದ ಘಟನೆಯನ್ನು ಶಾಸಕ ಶಿವರಾಮ ಹೆಬ್ಬಾರ ಖಂಡಿಸಿದ್ದಾರೆ.
ಈ ಕುರಿತು ಭಾನುವಾರ ಪ್ರಕಟಣೆ ನೀಡಿರುವ ಅವರು, ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕು ನೀಡಿದೆ.
ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಧಕ್ಕೆ ತರುವುದು ಸರಿಯಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಭದ್ರತೆ ಮುಖ್ಯವಾದರೂ, ಅದು ವಿದ್ಯಾರ್ಥಿಗಳ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಂಸ್ಕೃತಿಗೆ ಧಕ್ಕೆ ತರುವಂತಿರಬಾರದು.
ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿ, ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಗೌರವ ಮತ್ತು ನ್ಯಾಯ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು.
ವಿದ್ಯಾರ್ಥಿಗಳ ಮನೋಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಡೆಸುವುದು ಅತ್ಯವಶ್ಯಕ ಎಂದರು.