ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಗೌರವ ವಂದನೆ ಸ್ವೀಕರಿಸಿದರು.  
ಉತ್ತರ ಕನ್ನಡ

100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿ

ಸುಭಾಸ ಹೆಗಡೆ ಧೂಪದಹೊಂಡ

ಪ್ರಮುಖ ಮುಖ್ಯಾಂಶಗಳು

  • ಕಾರವಾರ ಪೊಲೀಸ್‌ ಗ್ರೌಂಡ್‌ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.
  • ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕಾರವಾರ:

ರಾಜ್ಯದಲ್ಲಿ ಮುಂದಿನ 100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ, ಆಡಳಿತ ವ್ಯವಸ್ಥೆಗೆ ಮತ್ತು ಅಭಿವೃದ್ಧಿಗೆ ಚುರುಕು ಮೂಡಿಸುವ ಗುರಿ ಹೊಂದಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ರೈತ ಮಿತ್ರ, ಬಡವರ ಬಂಧು, ಗ್ರಾಮಾನುಭವ, ಯುವ ಯುಗ, ಯುವ ಕರ್ನಾಟಕ ನಿರ್ಮಾಣ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್‌ ಹಾಗೂ ತೇಗದ ಸಿರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಽಕಾರದ ಮೂಲಕ ನಡೆಯುವ ನೇಮಕಾತಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಮತ್ತು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಹಲವು ಹುದ್ದೆಗಳ ನೇಮಕಾತಿಗೆ ಅಸೂಚನೆ ಹೊರಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 25 ಶಾಲೆಗಳನ್ನು ಗುರುತಿಸಲಾಗಿದೆ. ಸಿಎಸ್‌ಆರ್ ನಿಽಯಡಿ ಈ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಎಂಎಲ್‌ಸಿ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ, ಎಸ್‌ಪಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕಾರವಾರ ಎಸಿ ಶಾಲಂ ಹುಸೇನ್, ಜಲಸಾರಿಗೆ ಮಂಡಳಿಯ ಸಿಇಒ ಬಾಲಚಂದ್ರ ಇದ್ದರು.

ಆಕರ್ಷಕ ಪಥ ಸಂಚಲನ:

ಪೊಲೀಸ್, ಅರಣ್ಯ, ಗೃಹರಕ್ಷಕ ದಳ ಎನ್‌ಸಿಸಿ, ಸೇವಾದಳ ಸೇರಿ ಒಟ್ಟು 15 ತುಕಡಿಗಳ ಪಥ ಸಂಚಲನ ಗಮನ ಸೆಳೆಯಿತು. ಸಚಿವರು ತೆರೆದ ವಾಹನದಲ್ಲಿ ತೆರಳಿ ಕವಾಯತು ಸಿದ್ಧತೆ ವೀಕ್ಷಿಸಿದರು. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾರತ್ ಜೋಡೋ ಯುವ ಮಿಷÀನ್ ಸದಸ್ಯತ್ವ ಕಾರ್ಡ್ ವಿತರಿಸಲಾಯಿತು. ಅರಣ್ಯ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ನಕ್ಷೆ ಹಾಗೂ ಕಂದಾಯ ಇಲಾಖೆಯ ಅಽಕಾರಿಗಳು ಮತ್ತು ಸಿಬ್ಬಂದಿಯ ಡೈರೆಕ್ಟರಿಯನ್ನು ಬಿಡುಗಡೆ ಮಾಡಲಾಯಿತು. ಬಾಲಮಂದಿರ ಪ್ರೌಢಶಾಲೆ ಮತ್ತು ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.