ಹೊನ್ನಾವರ ರಾಮತೀರ್ಥ ತಿರುವಿನ ಸಮೀಪ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಮಣ್ಣು ಸಡಿಲಗೊಂಡು ಹೆದ್ದಾರಿಯಲ್ಲಿ ಬಿದ್ದಿದೆ. 
ಉತ್ತರ ಕನ್ನಡ

ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡಕುಸಿತ

ಹೊನ್ನಾವರ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಮಣ್ಣು ಸಡಿಲಗೊಂಡು ಕುಸಿದಿದೆ.
ಗುಡ್ಡ ಕುಸಿತದಿಂದ ಹೆದ್ದಾರಿಯ ಒಂದು ಭಾಗದ ರಸ್ತೆಯಲ್ಲಿ ಮಣ್ಣು ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಅಧಿಕಾರಿಗಳು ರಸ್ತೆ ಮೇಲೆ ಬಿದ್ದ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಐಆರ್‌ಬಿ ಕಂಪನಿಯವರು ಹೆದ್ದಾರಿ ಅಗಲೀಕರಣ ಮಾಡುವ ಸಮಯದಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಗುಡ್ಡದ ಮಣ್ಣು ತೆಗೆದಿರುವುದು ಕುಸಿತ ಸಂಭವಿಸಲು ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.