ಅರಣ್ಯ ಭೂಮಿ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಸಚಿವ ಎಚ್.ಕೆ. ಪಾಟೀಲ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಅರಣ್ಯ ಅತಿಕ್ರಮಣದಾರರ ಕುರಿತು ಚರ್ಚಿಸಿದರು. ಡಿ. ಆರ್. ಪಾಟೀಲ ಇದ್ದರು.
ಶಿರಸಿ: ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಭಂದಿಸಿ ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ವಿಶೇಷ ಕಲಾಪದ ಅವಧಿಯನ್ನ ನಿಗದಿಗೊಳಿಸಬೇಕು ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಎಚ್.ಕೆ. ಪಾಟೀಲ ಅವರನ್ನು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅದ್ಯಕ್ಷ ರವಿಂದ್ರ ನಾಯ್ಕ ಒತ್ತಾಯಿಸಿದ್ದಾರೆ.
ವಿಧಾನಸೌಧದ ಕಚೇರಿಯಲ್ಲಿ ಗುರುವಾರ ಪಂಚಾಯತ್ ರಾಜ್ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಅವರ ಉಪಸ್ಥಿತಿಯಲ್ಲಿ ಚರ್ಚಿಸುವ ಸಂದರ್ಭದಲ್ಲಿ ಈ ಕುರಿತು ಒತ್ತಾಯಿಸಿದರು.
ಅರಣ್ಯ ಹಕ್ಕು ಕಾಯ್ದೆ ಪಾರ್ಲಿಮೆಂಟ್ ಅಲ್ಲಿ ಅನುಮೋದನೆಗೊಂಡು 20 ವರ್ಷಗಳಾಗಿವೆ. ಕಾನೂನು ಅನುಷ್ಠಾನದಲ್ಲಿ ಗೊಂದಲ, ಸ್ಪಷ್ಟತೆ ಇಲ್ಲದ ಮಂಜೂರಿ ಪ್ರಕ್ರಿಯೆ, ಅರಣ್ಯವಾಸಿಗಳಿಗೆ ಪೂರ್ಣ ಪ್ರಮಾಣದ ಕಾನೂನು ಕೊರತೆ, ಆಡಳಿತಾತ್ಮಕ ವ್ಯವಸ್ಥೆಗೆ ಇಚ್ಚಾಶಕ್ತಿ ಕೊರತೆಯಿಂದ ರಾಜ್ಯದಲ್ಲಿ ಶೇ.82 ರಷ್ಟು ಅರ್ಜಿಗಳು ತಿರಸ್ಕಾರವಾಗಿದ್ದವು. ಕೇವಲ, ಶೇ 5.2 ರಷ್ಟು ಅರ್ಜಿಗಳಿಗೆ ಮಾನ್ಯತೆ ದೊರಕಿರುವ ಅಂಶವನ್ನ ಚರ್ಚೆಯ ಸಂದರ್ಭದಲ್ಲಿ ರವೀಂದ್ರ ನಾಯ್ಕ ಸಚಿವರ ಗಮನಕ್ಕೆ ತಂದರು.