ಸಂಸದ ವೀಶ್ವೇಶ್ವರ ಹೆಗಡೆ ಕಾಗೇರಿ ಅವರು ರೈಲ್ವೆ ಸಚಿವ ಅಶ್ವಿನ್ ವೈಷ್ಣವರ್ ಅವರನ್ನು ಭೇಟಿಯಾದರು.
ಕಾರವಾರ: ಕಾಚೆಗುಡ - ಮುರುಡೇಶ್ವರ ಎಕ್ಸ್ಪ್ರೆಸ್ ರೈಲನ್ನು (12789/90) ಕುಮಟಾ ರೈಲ್ವೆ ನಿಲ್ದಾಣದವರೆಗೆ ವಿಸ್ತರಿಸುವ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಜಿಲ್ಲೆಯ ಪ್ರಯಾಣಿಕರ ಹಿತದೃಷ್ಟಿಯಿಂದ ಈ ವಿಸ್ತರಣೆಯು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಮಾಡಿದೆ. ಇದರಿಂದ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕುಮಟಾ ವಿಸ್ತರಣೆಗೆ ಸಂಬAಽಸಿದAತೆ ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದೇ ವಿಷಯಕ್ಕೆ ಸಂಬAಽಸಿದAತೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಗೆ ಈ ಹಿಂದೆಯೇ ಮನವಿ ಸಲ್ಲಿಸಿ ಚರ್ಚಿಸಲಾಗಿತ್ತು ಎಂದು ಕಾಗೇರಿ ತಿಳಿಸಿದ್ದಾರೆ.