ಕಾನೂನು ಸೇವಾ ಪ್ರಾಧಿಕಾರದಿಂದ ರಸ್ತೆ ಜಾಗೃತಿ ಜಾಥಾ ನಡೆಯಿತು.
ಕಾರವಾರ:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಅವರು, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಡಿವೈಎಸ್ ಪಿ ಗಿರೀಶ್, ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಭಾಗ್ವತ್,
ಕಾರ್ಯದರ್ಶಿ ಚರಣ್ ನಾಯ್ಕ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗಣಪತಿ ಹೆಗಡೆ, ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳು, ಅರೆ ಕಾಲಿಕ ಸ್ವಯಂ ಸೇವಕರು, ಆಟೋ ಚಾಲಕರು, ಸಾರ್ವಜನಿಕರು ಭಾಗವಹಿಸಿದ್ದರು.